Tuesday, June 16, 2026
Homeತಾಜಾ ಸುದ್ದಿಕಣ್ಣಾಮುಚ್ಚಾಲೆ ಆಡೋಣ ಎಂದು ಕರೆದು ಬಾಲಕನ ಮೈಮೇಲಿದ್ದ ಚಿನ್ನಾಭರಣ ದೋಚಿದ ಕಳ್ಳರು

ಕಣ್ಣಾಮುಚ್ಚಾಲೆ ಆಡೋಣ ಎಂದು ಕರೆದು ಬಾಲಕನ ಮೈಮೇಲಿದ್ದ ಚಿನ್ನಾಭರಣ ದೋಚಿದ ಕಳ್ಳರು

- Advertisement -
- Advertisement -

ಬೆಂಗಳೂರು: ಕಣ್ಣಾಮುಚ್ಚಾಲೆ ಆಟ ಆಡೋಣ ಎಂದು ಕರೆದು ಬಾಲಕನ ಮೈಮೇಲಿದ್ದ ಚಿನ್ನಾಭರಣವನ್ನು ಕಳ್ಳರು ದೋಚಿರುವ ಘಟನೆ ಬೆಂಗಳೂರಿನ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉದ್ಯಮಿ ರಾಘವೇಂದ್ರ ಎಂಬುವವರು ಕುಟುಂಬ ಸಮೇತರಾಗಿ ಮಾಗಡಿ ರಸ್ತೆಯ ಸರಸ್ವತಿ ಕನ್ವೆನ್ಶನ್ ಹಾಲ್ ಬಳಿ ಸಂಬಂಧಿಯ ಮದುವೆಗೆಂದು ಬಂದಿದ್ದರು. ಈ ವೇಳೆ ಖದೀಮರು ಉದ್ಯಮಿ ಮಗನ ಮೈ ಮೇಲಿದ್ದ ಮೂರೂವರೆ ಲಕ್ಷ ರೂ. ಮೌಲ್ಯದ 79 ಗ್ರಾಂ ಚಿನ್ನಾಭರಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಆರು ವರ್ಷದ ಬಾಲಕನನ್ನು ಕರೆದು ಚಿನ್ನ ಕದ್ದು ಇಬ್ಬರು ಬೈಕ್ನಲ್ಲಿ ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉದ್ಯಮಿ ರಾಘವೇಂದ್ರ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!