Friday, June 5, 2026
Homeತಾಜಾ ಸುದ್ದಿಬಿ.ವೈ. ವಿಜಯೇಂದ್ರ ಅವರ ಆಸೆಗೆ ತಣ್ಣೀರೆರಚಿದ ಬಿಜೆಪಿ ಹೈಕಮಾಂಡ್

ಬಿ.ವೈ. ವಿಜಯೇಂದ್ರ ಅವರ ಆಸೆಗೆ ತಣ್ಣೀರೆರಚಿದ ಬಿಜೆಪಿ ಹೈಕಮಾಂಡ್

- Advertisement -
- Advertisement -

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿದ್ದು, ಕೊನೆಗೂ ಕುತೂಹಲಕ್ಕೆ ತೆರೆಬಿದ್ದಿದೆ.


ವಿಶೇಷವೆಂದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯ ನಾಯಕ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿದೆ.


ಲಿಂಗಾಯತ ಕೋಟಾದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ಧಾರವಾಡದ ಲಿಂಗರಾಜ್ ಪಾಟೀಲ್, ಮಹಿಳಾ ಹಾಗೂ ಒಕ್ಕಲಿಗ ಕೋಟಾದಲ್ಲಿ ಶಿವಮೊಗ್ಗ ಮೂಲದ ಸಿ.ಮಂಜುಳಾ, ದಲಿತ ಕೋಟಾದಲ್ಲಿ ಎಸ್‌ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹಾಗೂ ಒಬಿಸಿ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್ ನೀಡಿದೆ.


ಈ ಮೂಲಕ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯೇಂದ್ರ ಅವರ ಆಸೆಗೆ ಹೈಕಮಾಂಡ್ ತಣ್ಣೀರೆರಚಿದೆ.

- Advertisement -

Latest News

error: Content is protected !!