Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿರುದ್ಧ ಪ್ರತಿಭಟನೆ

ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿರುದ್ಧ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಕೆಲವು ದಿನಗಳ ಕಾಲ ಮಂಗಳೂರಿನಲ್ಲಿ ತಣ್ಣಗಿದ್ದ ಹಿಜಾಬ್ ವಿವಾದ ಪ್ರತಿಧ್ವನಿಸಿದೆ.

ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ತಲೆದೋರಿದ್ದು, ಕ್ಲಾಸ್ ಬಹಿಷ್ಕರಿಸಿ ಕ್ಯಾಂಪಸ್ ಬಳಿ ಪ್ರತಿಭಟನೆ‌ ನಡೆದಿದೆ.

ಹಂಪನಕಟ್ಟೆಯಲ್ಲಿರುವ ಕಾಲೇಜಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಪ್ರತಿಭಟನೆ‌‌ ನಡೆದಿದೆ.

ಹಿಜಾಬ್ ಧರಿಸಲು ಕೆಲವು ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿರುವ ಆರೋಪ ಮಾಡಿರುವ ಪ್ರತಿಭಟನಾನಿರತ ವಿದ್ಯಾರ್ಥಿಗಳು ನಮಗೂ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಅಂತಾ ಪ್ರತಿಭಟನೆ‌ ನಡೆಸಿದ್ದಾರೆ.

ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಸಭೆಯಲ್ಲಿ ಹಿಜಾಬ್ ಗೆ ಅವಕಾಶ ಇಲ್ಲ ಅಂತಾ ತೀರ್ಮಾನ ಮಾಡಿದ್ದರೂ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ.

- Advertisement -

Latest News

error: Content is protected !!