Monday, June 8, 2026
Homeತಾಜಾ ಸುದ್ದಿರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ ಮೂವತ್ತೊಂದಕ್ಕೆ ಸೇವಾ ನಿವೃತ್ತಿ ಹೊಂದುವ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ ನೇಮಕವಾಗಿದ್ದಾರೆ.

ವಂದಿತಾ ಶರ್ಮ ಇದುವರೆಗೆ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಜೂನ್ ಒಂದರಿಂದ ವಂದಿತಾ ಶರ್ಮ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ರಾಜ್ಯ ಸರ್ಕಾರ ಅಧಿಕೃತ ನೇಮಕಾತಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!