Sunday, May 19, 2024
Homeಕರಾವಳಿಉಡುಪಿಉಡುಪಿ: ದೇವನೂರು ಮಹಾದೇವ ಪೆನ್ನಿಗೆ ನಿವೃತ್ತಿ ಕೊಟ್ಟು ಮೈಕ್ ಮುಂದೆ ನಿಂತಿದ್ದಾರೆ: ಮತ್ತೆ ಪೆನ್‌ ಹಿಡಿದು...

ಉಡುಪಿ: ದೇವನೂರು ಮಹಾದೇವ ಪೆನ್ನಿಗೆ ನಿವೃತ್ತಿ ಕೊಟ್ಟು ಮೈಕ್ ಮುಂದೆ ನಿಂತಿದ್ದಾರೆ: ಮತ್ತೆ ಪೆನ್‌ ಹಿಡಿದು ಅದ್ಭುತ ಕೃತಿಯನ್ನು ರಚನೆ ಮಾಡಿ: ಸಂಸದ ಪ್ರತಾಪಸಿಂಹ ಸಲಹೆ

spot_img
- Advertisement -
- Advertisement -

ಉಡುಪಿ: ದೇವನೂರು ಮಹಾದೇವ ರಂತಹ ಹಿರಿಯ ಸಾಹಿತಿಗಳು ಪೆನ್ನಿಗೆ ನಿವೃತ್ತಿ ಕೊಟ್ಟು ಮೈಕ್ ಮುಂದೆ ನಿಂತಿದ್ದಾರೆ ಎಂದು ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಎದ್ದಿರುವ ವಿವಾದದ ಬಗ್ಗೆ ಮಾತನಾಡಿದ ಪ್ರತಾಪ್‌ ಸಿಂಹ,  ದೇವನೂರು ಮಹಾದೇವ 2014, 2019 ರಲ್ಲಿ ಮೈಸೂರಿನಲ್ಲಿ ನನ್ನ ವಿರುದ್ಧ , ಪ್ರಚಾರ ಮಾಡಿದ್ದಾರೆ. ದೇವನೂರು ಕಾಂಗ್ರೆಸ್ ಪರ ನನ್ನ ವಿರುದ್ಧ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು.ಆ ಭಾಗದಲ್ಲಿ ಜನ ಏನು ತೀರ್ಪು ಕೊಟ್ಟಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ದೇವನೂರು ಮಹಾದೇವ ಅವರ ಬಗ್ಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ಕುಸುಮಬಾಲೆ ಎಂಬ ಅದ್ಭುತ ಕೃತಿಯನ್ನು ಬರೆದವರು. ಕಾಂಗ್ರೆಸ್ ಪ್ರಚಾರ ಊಹಾಪೋಹಗಳನ್ನು ಬಿಟ್ಟು ಹಿಂದಿನ ಮಹಾದೇವರಾಗಿ ,ಮತ್ತೆ ಕೈಗೆತ್ತಿಕೊಂಡು ಒಂದು ಅದ್ಭುತ ಕೃತಿಯನ್ನು ರಚನೆ ಮಾಡಿ ಎಂದು ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ವಿಚಾರವಾಗಿ ಮಾತನಾಡಿದ ಸಂಸದ ಪ್ರತಾಪಸಿಂಹ, ಸಮಾಜ ಮತ್ತು ಕನ್ನಡ ಪಠ್ಯ ಪರಿಷ್ಕರಣೆ ಮಾಡಿದ್ದೇವೆ. ಡಿಕೆಶಿ, ಸಿದ್ದರಾಮಯ್ಯ ಇಲ್ಲದ ಸಲ್ಲದ ಊಹಾಪೋಹ ಸೃಷ್ಟಿ ಮಾಡಿದ್ದಾರೆ.ಬರಗೂರು ರಾಮಚಂದ್ರಪ್ಪ, ದೇವನೂರು ಮಹಾದೇವ ಇಲ್ಲಸಲ್ಲದ ಊಹಾಪೋಹ ಸೃಷ್ಟಿ ಮಾಡಿ ಹಬ್ಬಿಸಿದ್ದಾರೆ. ಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಮತ್ತು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ  ರೋಹಿತ್ ಚಕ್ರತೀರ್ಥ ಬಹಿರಂಗ ಚರ್ಚೆ ಆಹ್ವಾನ ನೀಡಿದ್ದಾರೆ. ಖುಲ್ಲಂ ಖುಲ್ಲ ಚರ್ಚೆ ಮಾಡೋಣ ಎಂದು ಕರೆ ನೀಡಿದರೂ, ಚರ್ಚೆಯಿಂದ ಯಾಕೆ ಪಲಾಯನ ಮಾಡಿತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಅನುಮಾನ ಸೃಷ್ಟಿ ಮಾಡುವುದು, ಊಹಾಪೋಹ ಹಬ್ಬಿಸುವುದಷ್ಟೇ ಇವರ ಉದ್ದೇಶ. ಅನಗತ್ಯ ತಕರಾರು ಎತ್ತುವವರು ವಿಚಾರ ನಪುಂಸಕರು.ಇವರಲ್ಲಿ ವಿಚಾರ ಇಲ್ಲ ಬರೀ ಉಗುಳು ಮಾತ್ರ ಇರೋದು. ವಿಚಾರ ನಪುಂಸಕತೆ ಇರುವುದರಿಂದ ಬರವಣಿಗೆ ಬಿಟ್ಟು ಎಷ್ಟೋ ವರ್ಷಗಳಾಯಿತು, ಈಗ ಇವರು ಮೈಕ್ ಮುಂದೆ ನಿಲ್ಲುವ ಮೈಕಾಸುರ ರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

.

- Advertisement -
spot_img

Latest News

error: Content is protected !!