Monday, June 8, 2026
Homeಕರಾವಳಿಮಂಗಳೂರಿನಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನಕ್ಕೆ ಚಾಲನೆ

ಮಂಗಳೂರಿನಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನಕ್ಕೆ ಚಾಲನೆ

- Advertisement -
- Advertisement -

ಮಂಗಳೂರು: ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಮೆರವಣಿಗೆಗೆ ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ನೀಡಲಾಯಿತು.

ನಂತರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಭಿಯಾನದ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ‌ಕತ್ತಲ್ ಸಾರ್ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.‌

ರಾಜ್ಯಾದ್ಯಂತ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೂರು ತಿಂಗಳ ಕಾಲ ನಡೆಯಲಿರುವ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

- Advertisement -

Latest News

error: Content is protected !!