Thursday, June 4, 2026
Homeಕರಾವಳಿಉಡುಪಿಮಣಿಪಾಲ:ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಮಣಿಪಾಲ:ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

- Advertisement -
- Advertisement -

ಮಣಿಪಾಲ: ಕಬ್ಯಾಡಿ ಕಂಬಳಕಟ್ಟೆಯಲ್ಲಿರುವ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೋರ್ವರ ಶವವು ಕೊಳೆತ ಸ್ಥಿತಿಯಲ್ಲಿ ಶನಿವಾರ ಕಂಡುಬಂದಿದೆ.

ಮೃತಪಟ್ಟಿರುವ ವ್ಯಕ್ತಿಯನ್ನು ನಿತ್ಯಾನಂದ ನಾಯ್ಕ್ (45) ಎಂದು ಗುರುತಿಸಲಾಗಿದೆ. ಇವರು ವಿಪರೀತ ಕುಡಿತದ ಚಟ ಹೊಂದಿದ್ದರು ಎಂದು ತಿಳಿದುಬಂದಿದೆ. ಮಣಿಪಾಲ ಪೊಲೀಸ್ ಠಾಣಾಧಿಕಾರಿ ರಾಜಶೇಖರ ಹೊಂದಾಳಿ ಘಟನಾ ಸ್ಥಳಕ್ಕೆ ಆಗಮಿಸಿ, ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ಎಂದಿನಂತೆ ಸಹಕರಿಸಿದ್ದಾರೆ.

- Advertisement -

Latest News

error: Content is protected !!