Wednesday, June 3, 2026
Homeತಾಜಾ ಸುದ್ದಿರಾಜ್ಯಸಭಾ ಚುನಾವಣೆಗೆ ಜೈರಾಂ ರಮೇಶ್ ಕಾಂಗ್ರೆಸ್ ಅಭ್ಯರ್ಥಿ: ರಾಜಸ್ಥಾನದಿಂದ ರಣದೀಪ್ ಸಿಂಗ್ ಸುರ್ಜೇವಾಲಾ ಕಣಕ್ಕೆ

ರಾಜ್ಯಸಭಾ ಚುನಾವಣೆಗೆ ಜೈರಾಂ ರಮೇಶ್ ಕಾಂಗ್ರೆಸ್ ಅಭ್ಯರ್ಥಿ: ರಾಜಸ್ಥಾನದಿಂದ ರಣದೀಪ್ ಸಿಂಗ್ ಸುರ್ಜೇವಾಲಾ ಕಣಕ್ಕೆ

- Advertisement -
- Advertisement -

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದೆ. ಹಾಲಿ ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿನ ಹಲವು ಹಿರಿಯ ನಾಯಕರ ವಿರೋಧದ ನಡುವೆಯೂ ಕಾಂಗ್ರೆಸ್ ಹೈಕಮಾಂಡ್ ಜೈರಾಂ ರಮೇಶ್ ಗೆ ಮತ್ತೊಮ್ಮೆ ಟಿಕೆಟ್ ನೀಡಿದೆ.

ಇನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜಸ್ಥಾನದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಪಿ. ಚಿದಂಬರಂ ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ.

ನಾಳೆ ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ನಾಮಪತ್ರ ಸಲ್ಲಿಸಲಿದ್ದಾರೆ.

ನಾಲ್ಕನೇ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಕಾಂಗ್ರೆಸ್ ಬೆಂಬಲಿಸುವುದು ಬಹುತೇಕ ಖಚಿತವಾಗಿದೆ.

- Advertisement -

Latest News

error: Content is protected !!