Sunday, June 29, 2025
Homeಉತ್ತರ ಕನ್ನಡಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ

ಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ

spot_img
- Advertisement -
- Advertisement -

ಕಾರವಾರ; ಜ್ವರ ಎಂದು ಆಸ್ಪತ್ರೆಗೆ ದಾಖಲಾದ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ನಡೆದಿದೆ. 24 ವರ್ಷದ ನವ ವಿವಾಹಿತೆ ಸನಾ ಮಾಂಜ್ರೇಕರ್ ಮೃತ ದುರ್ದೈವಿ.

ಸನಾಗೆ 19 ದಿನಗಳ‌ ಹಿಂದ ವಿವಾಹವಾಗಿತ್ತು. ಕಳೆದ 8 ದಿನಗಳ ಹಿಂದೆ ಸನಾಗೆ ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಇದಾದ ಬಳಿಕ ನಿನ್ನೆ ಮಧ್ಯಾಹ್ನದ ಮತ್ತೆ ಜ್ವರ, ತಲೆನೋವು ಕಾಣಿಸಿಕೊಂಡ ಹಿನ್ನೆಲೆ ಕಾರವಾರ ನಗರದ ಕಾಜುಭಾಗ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸನಾಳನ್ನು ದಾಖಲಿಸಲಾಗಿತ್ತು.

ಅಲ್ಲಿ ಸನಾಗೆ ಗ್ಲುಕೋಸ್‌ ಹಾಕಲಾಗಿದ್ದು, ರಾತ್ರಿ ವೇಳೆಗೆ ಕೊಂಚ ಚೇತರಿಸಿಕೊಂಡಿದ್ದಳು. ಇದಾದ ಬಳಿಕ ಊಟ ಮಾಡಲು ಮುಂದಾಗಿದ್ದಾಗ ಆಸ್ಪತ್ರೆಯ ಶುಶ್ರೂಷಕಿ ಸನಾಳಿಗೆ 4 ಇಂಜೆಕ್ಷನ್ ನೀಡಿದ್ದರು.ಇಂಜೆಕ್ಷನ್ ನೀಡಿದ ಕೆಲವೇ ಹೊತ್ತಿನಲ್ಲಿ ಆಕೆಗೆ ಹೊಟ್ಟೆ ಉರಿ ಕಾಣಿಸಿಕೊಂಡಿದ್ದು ಉಸಿರಾಟದಲ್ಲೂ ಏರುಪೇರಾಗಿತ್ತು. ಕೂಡಲೇ ಆಕೆಯನ್ನು ಪರಿಶೀಲಿಸಿದ ಆಸ್ಪತ್ರೆ ಸಿಬ್ಬಂದಿ ಐಸಿಯು ವ್ಯವಸ್ಥೆ ಇಲ್ಲದ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯುವಂತೆ ತಿಳಿಸಿದ್ದಾರೆ.

ಅಂಬ್ಯುಲೆನ್ಸ್ ಮೂಲಕ ಸನಾಳನ್ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ವೈದ್ಯರು ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಆಕೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!