Tuesday, October 13, 2026
Homeಕರಾವಳಿಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಇಂದೂ ಮುಂದುವರಿದ ಹಿಜಾಬ್ ವಿವಾದ

ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಇಂದೂ ಮುಂದುವರಿದ ಹಿಜಾಬ್ ವಿವಾದ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ವಿಚಾರದ ವಿವಾದ ಇಂದೂ ಮುಂದುವರಿದಿದೆ.

ಇಂದೂ ಕೂಡಾ ಹನ್ನೆರಡು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜು ಕ್ಯಾಂಪಸ್ ಗೆ ಬಂದಿದ್ದಾರೆ.

ನಂತರ ಹಿಜಾಬ್ ಧರಿಸಿ ಬಂದಿದ್ದ ಹನ್ನೆರಡು ವಿದ್ಯಾರ್ಥಿನಿಯರು ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದಾರೆ.‌

ಬುರ್ಖಾ ಮತ್ತು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಉಳಿದ ವಿದ್ಯಾರ್ಥಿಯರು ಬುರ್ಖಾ ಮತ್ತು ಹಿಜಾಬ್ ತೆಗೆದಿರಿಸಿ ತರಗತಿಗಳಿಗೆ ಹಾಜರಾಗಿದ್ದಾರೆ.

ಸದ್ಯ‌ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯಾರ್ಥಿನಿಯರು ಡಿಸಿ ಡಾ. ರಾಜೇಂದ್ರ ಅವರನ್ನು ಭೇಟಿ ಮಾಡಲು ಕಾಯುತ್ತಿದ್ದಾರೆ.

- Advertisement -

Latest News

error: Content is protected !!