Wednesday, June 3, 2026
Homeಕರಾವಳಿವಿಶ್ವವಿದ್ಯಾಲಯದ ಸಿಂಡಿಕೇಟ್ ನಿರ್ಧಾರದಂತೆ ವಿದ್ಯಾರ್ಥಿಗಳು ನಡೆದುಕೊಳ್ಳಬೇಕು: ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿಕೆ.

ವಿಶ್ವವಿದ್ಯಾಲಯದ ಸಿಂಡಿಕೇಟ್ ನಿರ್ಧಾರದಂತೆ ವಿದ್ಯಾರ್ಥಿಗಳು ನಡೆದುಕೊಳ್ಳಬೇಕು: ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿಕೆ.

- Advertisement -
- Advertisement -

ಮಂಗಳೂರು: ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಹತ್ವದ ಹೇಳಿಕೆ ನೀಡಿದ್ದಾರೆ.

ವಿಶ್ವವಿದ್ಯಾಲಯದ ಸಿಂಡಿಕೇಟ್ ನಿರ್ಧಾರದಂತೆ ವಿದ್ಯಾರ್ಥಿಗಳು ನಡೆದುಕೊಳ್ಳಬೇಕು. ಕೋರ್ಟ್ ನಿಯಮ ಪಾಲನೆ ಮಾಡಬೇಕು ಎಂದು ಮನವರಿಕೆ ಮಾಡಲಾಗಿದೆ.ಕಾಲೇಜು ಒಳಗೆ ಶಾಂತಿ ಭಂಗ ಮಾಡಬಾರದು. ಹಿಜಾಬ್ ಸಿಂಡಿಕೇಟ್ ನಿರ್ಧಾರದ ಬಗ್ಗೆ ದಾಖಲೆ ಕೇಳಿದ್ದಾರೆ. ಕಾನೂನು ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ ಎಂದಿದ್ದಾರೆ.

ಇನ್ನು ಕ್ಯಾಂಪಸ್ ನಲ್ಲಿ ಕಾನೂನು ಕೈಗೆ ತೆಗೆದುಕೊಳ್ಳಬಾರದು ಕಾಲೇಜಿನಲ್ಲಿ ನಿಯಮ ಉಲ್ಲಂಘನೆ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.

- Advertisement -

Latest News

error: Content is protected !!