Thursday, June 25, 2026
Homeಕರಾವಳಿಉಡುಪಿಹೆಬ್ರಿ ತಾಲೂಕು ನೂತನ ಆಡಳಿತ ಸೌಧ ಲೋಕಾರ್ಪಣೆ

ಹೆಬ್ರಿ ತಾಲೂಕು ನೂತನ ಆಡಳಿತ ಸೌಧ ಲೋಕಾರ್ಪಣೆ

- Advertisement -
- Advertisement -

ಹೆಬ್ರಿ: ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಇಂದು ಲೋಕಾರ್ಪಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೆಬ್ರಿಯಲ್ಲಿ ನೂತನ ಕಟ್ಟಡ ಉದ್ಘಾಟನೆ ಮಾಡಿದರು.

ಇದೇ ವೇಳೆ ಹೆಬ್ರಿ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಗಳಿಗೆ ಹಾಗೂ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಕೂಡಾ ಸಿಎಂ ಶಂಕುಸ್ಥಾಪನೆ ನೆರವೇರಿಸಿದರು.

ಹೆಬ್ರಿಯಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾದ ಆರ್ ಅಶೋಕ್ , ಗೋವಿಂದ ಕಾರಜೋಳ , ಸುನಿಲ್ ಕುಮಾರ್ , ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸುಕುಮಾರ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಇತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!