Saturday, June 6, 2026
Homeಅಪರಾಧತಾನು ಹೊಡೆದ ಏಟಿಗೆ ಹೆಂಡತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಗಂಡ ಆತ್ಮಹತ್ಯೆ

ತಾನು ಹೊಡೆದ ಏಟಿಗೆ ಹೆಂಡತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಗಂಡ ಆತ್ಮಹತ್ಯೆ

- Advertisement -
- Advertisement -

ಬೆಳಗಾವಿ: ಜಗಳದ ಮಧ್ಯೆ ಪತಿ ಪತ್ನಿಗೆ ಹೊಡೆದಿದ್ದಾನೆ. ಈ ವೇಳೆ ಪತ್ನಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ.ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ.


ನಾಗನೂರು ಪಟ್ಟಣದ ಅರಣ್ಯ ಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪಗೂಡೆನ್ನವರ ಆತ್ಮಹತ್ಯೆ ಮಾಡಿಕೊಂಡ ಯುವಕ.


ಈತ ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ.ಬುಧವಾರ ದಂಪತಿ ನಡುವೆ ಜಗಳವಾಗಿದೆ.ಇದರಿಂದ ಹೆಂಡತಿಗೆ ಮಹಾಂತೇಶ ಹೊಡೆದಿದ್ದಾನೆ. ಆಗ ಪತ್ನಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ.ಹೆಂಡತಿ ಕೆಳಗೆ ಬಿದ್ದಿದ್ದನ್ನು ನೋಡಿ ಅವಳು ಸಾವನ್ನಪ್ಪಿದ್ದಾಳೆ ಎಂಬ ಭಯದಲ್ಲಿ ಮನೆಯಲ್ಲಿರುವ ಗೋಡೆಯ ಗೂಟಕ್ಕೆ ನೇಣು ಹಾಕಿಕೊಂಡು ಮಹಾಂತೇಶ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸ್ ಠಾಣೆಯ ಪಿಎಸ್‌ಐ ಎಚ್ ವೈ ಬಾಲದಂಡಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!