Thursday, June 4, 2026
Homeತಾಜಾ ಸುದ್ದಿಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ: ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ: ಸಿದ್ದರಾಮಯ್ಯ...

ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ: ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ: ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌.ಈಶ್ವರಪ್ಪ ಕಿಡಿ

- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ… ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮನೆ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು.

- Advertisement -

Latest News

error: Content is protected !!