Thursday, June 4, 2026
Homeತಾಜಾ ಸುದ್ದಿದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಸಂಬಂಧಿತ ಸ್ಥಳಗಳ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಸಂಬಂಧಿತ ಸ್ಥಳಗಳ ಮೇಲೆ ಇಡಿ ದಾಳಿ

- Advertisement -
- Advertisement -

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಹವಾಲಾ ಆಪರೇಟರ್‌ಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿಮಾಡಿದ್ದು, ಶೋಧ ಕಾರ್ಯ ನಡೆಸುತ್ತಿದೆ.


ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೇ 30 ರಂದು ಬಂಧಿಸಿತ್ತು. ಈ ವರ್ಷದ ಏಪ್ರಿಲ್‌ನಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತ್ಯೇಂದ್ರ ಜೈನ್ ಕುಟುಂಬಕ್ಕೆ ಸೇರಿದ 4.81 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ + ಮಾಡಿತ್ತು.


2015-16ರಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಸತ್ಯೇಂದ್ರ ಜೈನ್ ಹವಾಲಾ ವಹಿವಾಟು ನಡೆಸಿದ್ದರು ಎಂದು ಇಡಿ ಆರೋಪಿಸಿದೆ. ಅಕ್ರಮ ಆಸ್ತಿ (ಡಿಎ) ಹೊಂದಿರುವ ಆರೋಪದ ಮೇಲೆ ಆಗಸ್ಟ್ 2017 ರಲ್ಲಿಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ತನಿಖೆ ನಡೆಸುತ್ತಿದೆ.

- Advertisement -

Latest News

error: Content is protected !!