Sunday, June 7, 2026
Homeಕರಾವಳಿಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ: ಟಿ.ಹೆಚ್.ಓ ಮತ್ತು ವೈದ್ಯರನ್ನು ತರಾಟೆಗೆ ತೆಗೆದುಕೊಂಡ...

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ: ಟಿ.ಹೆಚ್.ಓ ಮತ್ತು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಅಧಿಕಾರಿಗಳು

- Advertisement -
- Advertisement -

ಬೆಳ್ತಂಗಡಿ : ಸಾರ್ವಜನಿಕ ಸರಕಾರಿ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅವ್ಯವಸ್ಥೆ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿರುವ ಹಿನ್ನಲೆ ಇಂದು ಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು ನಂತರ ಟಿ.ಹೆಚ್.ಓ ಕಲಾ ಮಧು ಮತ್ತು ಕರ್ತವ್ಯ ನಿರತ ವೈದ್ಯರನ್ನು ಕರೆಸಿ ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ವೈದ್ಯರು ಕರ್ತವ್ಯ ಹಾಜರಾಗುತ್ತಿಲ್ಲ ಎಂಬ ಹಲವು ದೂರುಗಳು ಲೋಕಾಯಕ್ತ ಕಛೇರಿಗೆ ಬಂದಿರುವ ಹಿನ್ನಲೆಯಲ್ಲಿ ಇಂದು ಬೆಳಗ್ಗೆ  ಅಧಿಕಾರಿಗಳ ತಂಡ ಭೇಟಿ ನೀಡಿ ಆಸ್ಪತ್ರೆಯ ಟಿ.ಹೆಚ್.ಓ ಗೆ ಸೂಚನೆ ನೀಡಿ ತೆರಳಿದ್ದಾರೆ. ಲೋಕಾಯಕ್ತ ಎಸ್ಪಿ ಕುಮಾರಸ್ವಾಮಿ , ಡಿವೈಎಸ್ಪಿ ಕಲಾವತಿ , ಚೇಲುವರಾಜ್ , ಇನ್ಸ್‌ಪೆಕ್ಟರ್ ಅಮಾನುಲ್ಲಾ ಇದ್ದರು.

ಎರಡು ಬಾರಿ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ನಿಮ್ಮ ಮಹಾಎಕ್ಸ್ ವರದಿ ಮಾಡಿತ್ತು.  ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ವೈದ್ಯರು ಬಾರದೆ ಇರುವುದು ಮತ್ತು ರೋಗಿಗಳಿಗೆ ಸರಿಯಾಗಿ ಸ್ಪಂದಿಸದೇ ಇರುವ ಬಗ್ಗೆ ವರದಿ ಮಾಡಿತ್ತು.

- Advertisement -

Latest News

error: Content is protected !!