Friday, June 5, 2026
Homeಕರಾವಳಿಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ‌ನೋಟಿಸ್

ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ‌ನೋಟಿಸ್

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ಇಂದು ಕೂಡಾ ಹಿಜಾಬ್ ವಿವಾದ ಮುಂದುವರಿದಿದೆ. ಇಂದು ಕಾಲೇಜಿಗೆ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಹಾಜರಾಗಿದ್ದು, ವಿದ್ಯಾರ್ಥಿನಿಯರಿಗೆ ನೋಟೀಸ್ ನೀಡಿದ ವಿಶ್ವವಿದ್ಯಾಲಯ ಕಾಲೇಜು ಪ್ರಾಂಶುಪಾಲರು ನೋಟೀಸ್ ‌ನೀಡಿದ್ದಾರೆ.

ಕಾಲೇಜಿನ ಶಿಸ್ತು ಉಲ್ಲಂಘಿಸಿ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ನೋಟೀಸ್ ಜಾರಿ ಮಾಡಲಾಗಿದೆ.‌ ಶನಿವಾರ ಸುದ್ದಿಗೋಷ್ಠಿ ನಡೆಸಿ ಕಾಲೇಜು ಆಡಳಿತ ಮಂಡಳಿಗೆ ಎರಡು ದಿನಗಳ ಗಡುವು ನೀಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ನೋಟೀಸ್‌ ನೀಡಲಾಗಿದೆ. ಮೊದಲ ಹಂತವಾಗಿ ನೋಟೀಸ್ ನೀಡಿ ವಿದ್ಯಾರ್ಥಿನಿಯರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!