Thursday, June 4, 2026
Homeತಾಜಾ ಸುದ್ದಿಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

- Advertisement -
- Advertisement -

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಇಂದು ಅಧಿಕೃತವಾಗಿ ಅಮ್ ಆದ್ಮಿ ಪಕ್ಷಕ್ಕೆ(ಎಎಪಿ) ಸೇರ್ಪಡೆಗೊಂಡರು.


ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರು ಅವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು. ಮುಂದಿನ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಎಎಪಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದೆ.
ಈಗಾಗಲೇ ಮಾಜಿ ಐಪಿಎಸ್ ಅಧಿಕಾರಿ, ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಸೇರಿದಂತೆ ಅನೇಕ ಪ್ರಮುಖರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

- Advertisement -

Latest News

error: Content is protected !!