Monday, August 31, 2026
Homeತಾಜಾ ಸುದ್ದಿರಾಜ್ಯದ 4 ಆರ್ ಎಸ್ ಎಸ್ ಕಚೇರಿಗಳನ್ನು ಧ್ವಂಸಗೊಳಿಸುವ ಬೆದರಿಕೆ: ಆರ್ ಎಸ್ ಎಸ್ ಕಚೇರಿಗಳಿಗೆ...

ರಾಜ್ಯದ 4 ಆರ್ ಎಸ್ ಎಸ್ ಕಚೇರಿಗಳನ್ನು ಧ್ವಂಸಗೊಳಿಸುವ ಬೆದರಿಕೆ: ಆರ್ ಎಸ್ ಎಸ್ ಕಚೇರಿಗಳಿಗೆ ಭದ್ರತೆ ಒದಗಿಸಲು ಮುಂದಾದ ರಾಜ್ಯ ಸರ್ಕಾರ

- Advertisement -
- Advertisement -

ಬೆಂಗಳೂರು: ರಾಜ್ಯದ ನಾಲ್ಕು ಆರ್ ಎಸ್ಎಸ್ ಕಚೇರಿಗಳ ಮೇಲೆ ದಾಳಿ ನಡೆಸುವುದಾಗಿ ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ಎಸ್ ಕಚೇರಿಗಳನ್ನು ಧ್ವಂಸ ಗೊಳಿಸುವುದಾಗಿ ವಾಟ್ಸಪ್ ಸಂದೇಶ ಕಳುಹಿಸಲಾಗಿತ್ತು.

ತಮಿಳುನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಸಂದೇಶ ಕಳುಹಿಸಿದ್ದಾನೆ. ಆರೋಪಿಯಾಗಿರುವ ವ್ಯಕ್ತಿಯನ್ನು ಸೆಂಥಿಲ್ ಎಂದು ಗುರುತಿಸಲಾಗಿದ್ದು, ತಮಿಳುನಾಡಿನಲ್ಲಿ ಬಂಧಿಸಲಾಗಿದೆ.

ವಾಟ್ಸಪ್ ಸಂದೇಶಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದ್ದು, ಎಲ್ಲಾ ಆರ್ ಎಸ್ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

- Advertisement -

Latest News

error: Content is protected !!