Thursday, June 4, 2026
Homeಕರಾವಳಿಉಡುಪಿಉಡುಪಿ: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ಯುವಕ ಸಾವು

ಉಡುಪಿ: ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ಯುವಕ ಸಾವು

- Advertisement -
- Advertisement -

ಉಡುಪಿ: ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆ ನಿವಾಸಿ ಭರತ್ (22) ಮೃತ ಯುವಕ.

ಮೃತ ಭರತ್ ಸಿಡಿಲು ಸಹಿತ ಮಳೆ ಬರುವಾಗ ಮನೆಯಲ್ಲಿ ಕುಳಿತಿದ್ದನು. ಆದರೂ ಸಿಡಿಲು ಬಡಿದು ಯುವಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತ ಭರತ್ ಕೊನೆಯುಸಿರೆಳೆದಿದ್ದಾರೆ.

ಮಾಹಿತಿ ತಿಳಿದು ಜಿಲ್ಲೆಯ ಕಾಪು ತಾಲೂಕಿನ ಪೊಲೀಸ್ ಠಾಣಾಧಿಕಾರಿ ರಾಜ್‍ಶೇಖರ್ ಸಾಗನೂರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಭರತ್ ಇಲ್ಲಿನ ವಿಶ್ವನಾಥ ಕ್ಷೇತ್ರದಲ್ಲಿ ಅನ್ನ ಸಂತರ್ಪಣೆ ಯೋಜನೆಯಲ್ಲಿ ಭಾಗಿಯಾಗಿದ್ದು, ಅಂಬಾಡಿ ಚಂಡೆ ಬಳಗದ ಸದಸ್ಯರಾಗಿದ್ದರು. ಮೃತರ ತಂದೆ ಸೆಂಟ್ರಿಂಗ್ ಕಾರ್ಮಿಕರಾಗಿದ್ದಾರೆ.

- Advertisement -

Latest News

error: Content is protected !!