Monday, August 31, 2026
Homeಕರಾವಳಿಮಂಗಳೂರು: ರವಿರಾಜ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್, ಬಂಧನ : ಮೂವರು...

ಮಂಗಳೂರು: ರವಿರಾಜ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್, ಬಂಧನ : ಮೂವರು ಸಿಸಿಬಿ ಪೊಲೀಸರಿಗೂ ಗಾಯ

- Advertisement -
- Advertisement -

ಮಂಗಳೂರು: ಮುಲ್ಕಿಯಲ್ಲಿ ಬೆಳ್ಳಂಬೆಳಗ್ಗೆ ರವಿರಾಜ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ, ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್ ಗೆ ಪೊಲೀಸರ ಗುಂಡೇಟು ತಗುಲಿದೆ. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಬಳಿಕ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್

ಇನ್ನು ಬಂಧನದ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿದ್ದರಿಂದ ಮೂವರು ಪೊಲೀಸರಿಗೂ ಗಾಯಗಳಾಗಿವೆ. ಸಿಸಿಬಿ ಪಿಎಸ್ಐ ನಾಗೇಂದ್ರ, ಎಸ್ ಸಿ ಸಂತೋಷ್, ಎಎಸ್ ಐ ಡೇವಿಡ್ ಎಂಬವರಿಗೆ ಗಾಯಗಳಾಗಿವೆ.

ಅರ್ಜುನ್ ಮೂಡುಶೆಡ್ಡೆ, ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್
ಪೊಲೀಸರಿಗೆ ಗಾಯ

- Advertisement -

Latest News

error: Content is protected !!