Friday, June 5, 2026
Homeಕರಾವಳಿಮಂಗಳೂರು: ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆ

ಮಂಗಳೂರು: ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಮೊಬೈಲ್ ಅಂಗಡಿ ಹೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ಘಟನೆ ಕೂಳೂರಿನಲ್ಲಿ ನಡೆದಿದೆ.

ಸುರತ್ಕಲ್, ಚೊಕ್ಕಬೆಟ್ಟು ನಿವಾಸಿ ಶಹೀದ್ (34) ಮೃತ ಯುವಕ.

ಮೊಬೈಲ್ ಅಂಗಡಿಯ ಹಿಂಬದಿಯ ರೂಮಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಶಹೀದ್ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದು, ಮನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾವೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!