Saturday, June 6, 2026
Homeಕರಾವಳಿಉಡುಪಿಉಡುಪಿ: ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಯುವಕ ಸಾವು

ಉಡುಪಿ: ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಯುವಕ ಸಾವು

- Advertisement -
- Advertisement -

ಉಡುಪಿ : ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು  ಯುವಕ ಮೃತಪಟ್ಟ ಘಟನೆ ಕುಂದಾಪುರದ ಹಾಲಾಡಿ ಶಂಕರನಾರಾಯಣ ಸಮೀಪ ನಡೆದಿದೆ.

ಹಾಲಾಡಿ ನಿವಾಸಿ ಉಮೇಶ್ (35) ಮೃತ ದುರ್ದೈವಿ. ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ 40 ಅಡಿ ಆಳದ ಆವರಣ ಇಲ್ಲದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಮೃತದೇಹ ವನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಸ್ಥಳೀಯರ ಸಹಕಾರದೊಂದಿಗೆ ಮೇಲೆತ್ತಿದ್ದಾರೆ. ಮೃತದೇಹ  40 ಅಡಿ ಆಳದಲ್ಲಿ ಸಿಲುಕಿತ್ತು ಎನ್ನಲಾಗಿದೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!