Saturday, June 6, 2026
Homeತಾಜಾ ಸುದ್ದಿಪ್ರತಿಭಟನೆಗೆ ಆಗಮಿಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ!

ಪ್ರತಿಭಟನೆಗೆ ಆಗಮಿಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ!

- Advertisement -
- Advertisement -

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟೀಸ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಘಟನೆ ನಡೆದಿದೆ.

ರಾಹುಲ್ ಗಾಂಧಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದನ್ನು ವಿರೋಧಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಪ್ರತಿಭಟನೆಗೆ ಆಗಮಿಸಿದ್ದ ವೇಳೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು.

ಇನ್ನೋವಾ ಕಾರಿನಲ್ಲಿ ಬಂದಿಳಿಯುತ್ತಿದ್ದ ವೇಳೆ ಕಾರಿನ ಬಳಿ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರನ್ನು ತಳ್ಳಿ ಬಿ.ವಿ. ಶ್ರೀನಿವಾಸ್ ತಪ್ಪಿಸಿಕೊಂಡು ಎಐಸಿಸಿ ಕಚೇರಿ ಕಡೆಗೆ ಓಡಿ ಹೋಗಿದ್ದಾರೆ. ‌

ಶ್ರೀನಿವಾಸ್ ಓಡಿ ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!