Thursday, June 4, 2026
Homeತಾಜಾ ಸುದ್ದಿಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲು ಮುಂದಾದ ಕೇಂದ್ರ ಸರ್ಕಾರ : ಒಂದೂವರೆ ವರ್ಷದಲ್ಲಿ ಹತ್ತು ಲಕ್ಷ ನೇಮಕಾತಿಗೆ...

ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲು ಮುಂದಾದ ಕೇಂದ್ರ ಸರ್ಕಾರ : ಒಂದೂವರೆ ವರ್ಷದಲ್ಲಿ ಹತ್ತು ಲಕ್ಷ ನೇಮಕಾತಿಗೆ ಪ್ರಧಾನಿ ಸೂಚನೆ

- Advertisement -
- Advertisement -

ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ನೇಮಕಾತಿಗಳು ನಡೆಯಲಿವೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಸರ್ಕಾರದ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಈ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯನ್ನು ಪರಿಶೀಲಿಸಿರುವ ಪ್ರಧಾನಿ ನರೇಂದ್ರ ಮೋದಿ, ಖಾಲಿ ಹುದ್ದೆಗಳಿಗೆ ಒಂದೂವರೆ ವರ್ಷದಲ್ಲಿ ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಆರ್ಥಿಕ ಹಿಂಜರಿತ ಮತ್ತು ಕೋವಿಡ್ ಕಾರಣಗಳಿಂದ ಉದ್ಯೋಗಗಳು ಕಡಿತವಾಗಿದ್ದ ಕಾರಣ ಕೇಂದ್ರ ಸರ್ಕಾರದ ಉಪಕ್ರಮ ಮಹತ್ವದ ಬದಲಾವಣೆ ತರುವ ನಿರೀಕ್ಷೆ ಇದೆ.

ಮುಂದಿನ ಒಂದೂವರೆ ವರ್ಷದಲ್ಲಿ ಅಭಿಯಾನದ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

- Advertisement -

Latest News

error: Content is protected !!