Saturday, June 6, 2026
Homeಕರಾವಳಿಉಡುಪಿಕರ್ನಾಟಕದಲ್ಲಿ ಕೊರೋನಾ ಮಹಾಸ್ಫೋಟ: ಉಡುಪಿಯ ನಾಲ್ವರಿಗೆ ಕೊರೋನಾ ಪಾಸಿಟಿವ್

ಕರ್ನಾಟಕದಲ್ಲಿ ಕೊರೋನಾ ಮಹಾಸ್ಫೋಟ: ಉಡುಪಿಯ ನಾಲ್ವರಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಉಡುಪಿ: ಕೊರೊನಾ ಸೋಂಕಿತರ ಸಂಖ್ಯೆ ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ಕೃಷ್ಣ ನಗರಿ ಉಡುಪಿಯಲ್ಲಿ ನಾಲ್ವರಿಗೆ ಇಂದು ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಇಂದು ಸೋಂಕು ತಗುಲಿರುವ ನಾಲ್ವರಿಗೂ ಮಹಾರಾಷ್ಟ್ರ ಸಂಪರ್ಕದಿಂದ ಬಂದಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ.

ಕರ್ನಾಟಕದಲ್ಲಿ ಇಂದು 127 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ1373 ಕ್ಕೆ ಏರಿಕೆಯಾಗಿದೆ.

ಇಲ್ಲಿಯವರೆಗೆ ಗ್ರೀನ್ ಝೋನ್ ನಲ್ಲಿದ್ದ ಚಿಕ್ಕಮಗಳೂರಿನಲ್ಲಿ ಇಂದು ಇಬ್ಬರಿಗೆ ಸೋಂಕು ತಗುಲಿದೆ.

ಮಂಡ್ಯಕ್ಕೆ ದುಬಾರಿಯಾದ ಮಹಾರಾಷ್ಟ್ರ ನಂಜು

ಮಂಡ್ಯದಲ್ಲಿ ಇಂದು ಬರೋಬ್ಬರಿ 61 ಪ್ರಕರಣಗಳು ವರದಿಯಾಗಿದೆ. ನಿನ್ನೆ (ಸೋಮವಾರ) 17 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಎಲ್ಲರೂ ಅಂತಾರಾಜ್ಯ ಪ್ರಯಾಣಿಕರಾಗಿದ್ದು ಮಹಾರಾಷ್ಟ್ರದ ಮುಂಬಯಿಗೆ ಭೇಟಿ ನೀಡಿದ ಟ್ರಾವೆಲ್‌ ಹಿಸ್ಟರಿ ಹೊಂದಿದ್ದಾರೆ. ಇದರೊಂದಿಗೆ ಮಂಡ್ಯ ಜಿಲ್ಲೆಯ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!