Friday, June 5, 2026
Homeಕರಾವಳಿಉಡುಪಿಉಡುಪಿ:ಡಿವೈಡರ್ ಗೆ ಬೈಕ್ ಡಿಕ್ಕಿ, ವಿದ್ಯಾರ್ಥಿನಿ ಸಾವು

ಉಡುಪಿ:ಡಿವೈಡರ್ ಗೆ ಬೈಕ್ ಡಿಕ್ಕಿ, ವಿದ್ಯಾರ್ಥಿನಿ ಸಾವು

- Advertisement -
- Advertisement -

ಉಡುಪಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಡೆದಿದೆ. ಬೈಕ್ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರೆ ಹಿಂದುಜಾ ಎಂಬವರು ವಾಹನ ಸಮೇತ ರಸ್ತೆಗೆ ಬಿದ್ದಿದ್ದ್ರೆ. ಪರಿಣಾಮ ತೀವ್ರಗಾಯಗೊಂಡು ಮೃತ ಪಟ್ಟಿದ್ದಾರೆ ಎನ್ನಲಾಗಿದೆ.

ಹಿಂದುಜಾ ಅವರು ವರ್ಷಿಣಿ ಎಂಬವರನ್ನು ಹಿಂಬದಿ ಸವಾರಳಾಗಿ ಕುಳ್ಳಿರಿಸಿಕೊಂಡು ರಾತ್ರಿ 12-20ರ ಸುಮಾರಿಗೆ ಟೈಗರ್ ಸರ್ಕಲ್ ಕಡೆಯಿಂದ ಸಿಂಡಿಕೇಟ್ ಸರ್ಕಲ್ ಕಡೆ ರಾ.ಹೆದ್ದಾರಿ 69ರಲ್ಲಿ ವೇಗವಾಗಿ ಹೋಗುತ್ತಿರುವಾಗ ಟೆಂಪೂ ನಿಲ್ದಾಣದ ಬಳಿ ವಾಹನದ ಹತೋಟಿ ಕಳೆದುಕೊಂಡು ಬಲಬದಿಯ ಡಿವೈಡರ್‌ಗೆ ಢಿಕ್ಕಿ ಹೊಡೆದಿತ್ತು.

ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ತಲೆ ಹಿಂಬದಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ವರ್ಷಿಣಿಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!