Saturday, June 6, 2026
Homeಚಿಕ್ಕಮಗಳೂರುಚಿಕ್ಕಮಗಳೂರಿನಲ್ಲೂ ಎಸಿಬಿ ಅಧಿಕಾರಿಗಳ ದಾಳಿ

ಚಿಕ್ಕಮಗಳೂರಿನಲ್ಲೂ ಎಸಿಬಿ ಅಧಿಕಾರಿಗಳ ದಾಳಿ

- Advertisement -
- Advertisement -

ಚಿಕ್ಕಮಗಳೂರು: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ರಾಜ್ಯ 80ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದು, ಚಿಕ್ಕಮಗಳೂರಿನ SDA ತಿಮ್ಮಯ್ಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿರುವ ತಿಮ್ಮಯ್ಯ ನಿವಾಸ, ತಿಮ್ಮಯ್ಯ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಜಂಪುರ ಪುರಸಭೆ ಕಚೇರಿ, ತಿಮ್ಮಯ್ಯ ತಂದೆಯ ಬಸೂರು ನಿವಾಸದ ಮೇಲೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತಿಮ್ಮಯ್ಯ ಆದಾಯಕ್ಕಿಂತ 80 ಲಕ್ಷಕ್ಕೂ ಅಧಿಕ ಹಣ ಗಳಿಸಿರುವ ಆರೋಪದಡಿ, ಮೂರು ಕಡೆಗಳಲ್ಲೂ ದಾಳಿ ನಡೆಸಿ ಪರಿಶೀಲನೆ ಮುಂದುವರಿಸಿದ್ದಾರೆ ಎಸಿಬಿ ಅಧಿಕಾರಿಗಳು.

- Advertisement -

Latest News

error: Content is protected !!