Thursday, June 4, 2026
Homeಕರಾವಳಿಉಡುಪಿಉಡುಪಿ ಸಣ್ಣ ನೀರಾವರಿ ಇಲಾಖೆ ಎಇ ಹರೀಶ್ ನಿವಾಸದ ಮೇಲೆ ಎಸಿ ಬಿ ದಾಳಿ ಪ್ರಕರಣ...

ಉಡುಪಿ ಸಣ್ಣ ನೀರಾವರಿ ಇಲಾಖೆ ಎಇ ಹರೀಶ್ ನಿವಾಸದ ಮೇಲೆ ಎಸಿ ಬಿ ದಾಳಿ ಪ್ರಕರಣ ;ಚಿನ್ನಾಭರಣ, ಆಸ್ತಿ ಪತ್ರ ಪತ್ತೆ ಮಾಡಿದ ಎಸಿಬಿ ಅಧಿಕಾರಿಗಳು

- Advertisement -
- Advertisement -

ಉಡುಪಿ: ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ನಡೆದ ಎಸಿಬಿ ದಾಳಿಯಲ್ಲಿ ಹೆಚ್ಚಿನ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿವೆ.

ಎರಡು ಕೆಜಿಗೂ ಅಧಿಕ ಚಿನ್ನವನ್ನು ಅಧಿಕಾರಿಗಳು ಪತ್ತೆ ಮಾಡಿದ್ದು, ಸುಮಾರು 5 ಲಕ್ಷ ರೂಪಾಯಿ ನಗದನ್ನು ಹರೀಶ್ ಮನೆಯಲ್ಲಿ ಇರಿಸಿಕೊಂಡಿದ್ದ‌ ಬಗ್ಗೆ ಮಾಹಿತಿ ಲಭ್ಯವಾಗಿದೆ.

ದುಬಾರಿ ಬೆಲೆಯ ವಾಚುಗಳು, ಮೂರು ವಾಹನಗಳು, ಚಿನ್ನದ ತಟ್ಟೆ, ಆಭರಣಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.

15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಸರ, ನೆಕ್ಲೆಸ್,ಬ್ರೇಸ್ ಲೆಟ್, ಉಂಗುರ, ದೇವರ ಮೂರ್ತಿ ಪತ್ತೆಯಾಗಿದೆ.

ಆಸ್ತಿ ಪತ್ರ,ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡದಿಂದ ದಾಳಿ‌ ನಡೆದಿದೆ.

- Advertisement -

Latest News

error: Content is protected !!