Thursday, June 4, 2026
Homeಕರಾವಳಿಮಂಗಳೂರು: ಉರ್ವ ಬಳಿ ಸಮುದಾಯ ಭವನಕ್ಕೆ ಶಿಲಾನ್ಯಾಸ

ಮಂಗಳೂರು: ಉರ್ವ ಬಳಿ ಸಮುದಾಯ ಭವನಕ್ಕೆ ಶಿಲಾನ್ಯಾಸ

- Advertisement -
- Advertisement -

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು.

ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಮತ್ತು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ನೆರವೇರಿಸಿದರು.

ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಸಮುದಾಯ ಭವನ ನಿರ್ಮಾಣಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ನಾಡೋಜ ಡಾ. ಜಿ. ಶಂಕರ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಗಣೇಶ್ ಕುಲಾಲ್, ಶ್ರೀಮತಿ ಲೀಲಾವತಿ ಪ್ರಕಾಶ್, ಜಗದೀಶ್ ಶೆಟ್ಟಿ ಬೋಳೂರು, ರಾಧಾಕೃಷ್ಣ, ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಗೌತಮ್ ಸಾಲ್ಯಾನ್ ಕೋಡಿಕಲ್, ಆಡಳಿತ ಮೊಕ್ತೇಸರ ದೇವಾನಂದ ಗುರಿಕಾರ, ಉಪಸ್ಥಿತರಿದ್ದರು.

- Advertisement -

Latest News

error: Content is protected !!