Saturday, June 6, 2026
Homeಕರಾವಳಿಮಂಗಳೂರು: ಇನ್ನೂ ಬಗೆಹರಿಯದ ಹಿಜಾಬ್ ಗೊಂದಲ: ಹಿಜಾಬ್ ಧರಿಸಲು ಅವಕಾಶ ನೀಡದ್ದಕ್ಕೆ ಟಿಸಿ ಪಡೆಯಲು ಮುಂದಾದ...

ಮಂಗಳೂರು: ಇನ್ನೂ ಬಗೆಹರಿಯದ ಹಿಜಾಬ್ ಗೊಂದಲ: ಹಿಜಾಬ್ ಧರಿಸಲು ಅವಕಾಶ ನೀಡದ್ದಕ್ಕೆ ಟಿಸಿ ಪಡೆಯಲು ಮುಂದಾದ ವಿದ್ಯಾರ್ಥಿನಿಯರು

- Advertisement -
- Advertisement -

ಮಂಗಳೂರು: ಹಂಪನಕಟ್ಟೆ ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ಹಿಜಾಬ್ ವಿವಾದ ಬಗೆಹರಿಯುವ ಲಕ್ಷಣ ಸದ್ಯಕ್ಕಂತೂ ಗೋಚರಿಸುತ್ತಿಲ್ಲ.  

ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಟ್ರಾನ್ಸ್​ಫರ್ ಸರ್ಟಿಫಿಕೇಟ್ ಪಡೆಯಲು ಮುಂದಾಗಿದ್ದಾರೆ.

ಇತ್ತೀಚೆಗೆ ಕಾಲೇಜಿನ ಹಿಜಾಬ್ ವಿವಾದ ರಾಜ್ಯದಲ್ಲಿ ಮತ್ತೆ ಸುದ್ದಿಯಾಗಿತ್ತು. ಮಂಗಳೂರು ವಿ ವಿ ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ 15 ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು‌ ನಿರಾಕರಿಸಿದ್ದರು.

ಈ‌ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಅನುಸೂಯ, ಟಿಸಿ ಪಡೆಯುವ ಬಗ್ಗೆ ವಿದ್ಯಾರ್ಥಿನಿಯರು ಮಾತನಾಡಿದ್ದರು. ಆದರೆ ಯಾರು ಈವರೆಗೆ ಟಿಸಿ ಪಡೆಯಲು ಅರ್ಜಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement -

Latest News

error: Content is protected !!