Friday, June 5, 2026
Homeತಾಜಾ ಸುದ್ದಿಚಾಮುಂಡೇಶ್ವರಿ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಧ್ಯಾನ ಮಾಡಿದ ಪ್ರಧಾನಿ ಮೋದಿ

ಚಾಮುಂಡೇಶ್ವರಿ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಧ್ಯಾನ ಮಾಡಿದ ಪ್ರಧಾನಿ ಮೋದಿ

- Advertisement -
- Advertisement -

ಮೈಸೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ‌ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ‌

ದೇವಸ್ಥಾನದಲ್ಲಿ ನರೇಂದ್ರ ಮೋದಿ ರಾಷ್ಟ್ರದ ಹೆಸರಲ್ಲಿ ಸಂಕಲ್ಪ ಪೂಜೆ ಮಾಡಿಸಿದ್ದಾರೆ. ದೇವಾಲಯದ ಪ್ರಧಾನ ಅರ್ಚಕ ಡಾ. ಶಶಿಶೇಖರ ದೀಕ್ಷಿತರಿಂದ ರಾಷ್ಟ್ರಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿ ಸಂಕಲ್ಪ ಪೂಜೆ ನಡೆದಿದೆ.

ನಂತರ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಕೇಸರಿ ಶಾಲು ಹೊದ್ದು ಕುಳಿತು ಪ್ರಧಾನಿ ಮೋದಿ ಧ್ಯಾನ ಮಾಡಿದ್ದಾರೆ.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಉಪಸ್ಥಿತರಿದ್ದರು.‌

- Advertisement -

Latest News

error: Content is protected !!