Thursday, June 4, 2026
Homeತಾಜಾ ಸುದ್ದಿಮಹಾರಾಷ್ಟ್ರ: ತೈಲ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ

ಮಹಾರಾಷ್ಟ್ರ: ತೈಲ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ

- Advertisement -
- Advertisement -

ಅಕೋಲಾ: ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಅಕೋಲಾ ಜಿಲ್ಲೆಯಲ್ಲಿರುವ ತೈಲಾ ಕಾರ್ಖಾನೆ ಘಟಕದಲ್ಲಿ ಭಾರಿ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ.

ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಕೋಲಾದ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಪ್ರದೇಶದಲ್ಲಿರುವ ಖಾಸಗಿ ಘಟಕದಲ್ಲಿ ಮಂಗಳವಾರ ರಾತ್ರಿ ಸುಮಾರು 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದಿದೆ.

ಆಟೋಮೊಬೈಲ್ ಕ್ಷೇತ್ರದಲ್ಲಿ ಬಳಕೆಯಾಗುವ ತೈಲ ತಯಾರಿಸುವ ಘಟಕ ಇದಾಗಿದೆ ಎಂದು ಹೇಳಲಾಗಿದೆ. ಅಂದಾಜು ಈ ದುರಂತದಿಂದ ಎಷ್ಟು ನಷ್ಟವಾಗಿದೆ ಎಂದು ತಿಳಿದು ಬಂದಿಲ್ಲ. ಆದರೆ, ಆವರಣದಲ್ಲಿ ಇರಿಸಿದ್ದ ತೈಲ ಮತ್ತು ಇತರ ವಸ್ತುಗಳು ಸಂಪೂರ್ಣವಾಗಿ ನಾಶವಾಗಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ, ಒಂದು ಗಂಟೆಯಲ್ಲಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -

Latest News

error: Content is protected !!