Thursday, June 4, 2026
Homeತಾಜಾ ಸುದ್ದಿ2024ರ ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಎರಡು ರಾಜ್ಯ!: ಬೆಳಗಾವಿಯಲ್ಲಿ ಸಚಿವ ಉಮೇಶ್ ಕತ್ತಿ ಹೇಳಿಕೆ

2024ರ ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಎರಡು ರಾಜ್ಯ!: ಬೆಳಗಾವಿಯಲ್ಲಿ ಸಚಿವ ಉಮೇಶ್ ಕತ್ತಿ ಹೇಳಿಕೆ

- Advertisement -
- Advertisement -

ಬೆಳಗಾವಿ: 2024 ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಆಹಾರ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಹೇಳಿರುವ ಉಮೇಶ್ ಕತ್ತಿ, 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿದ್ದು, ಆಗ ಕರ್ನಾಟಕವೂ ಎರಡು ರಾಜ್ಯಗಳಾಗಲಿವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ,
ರಾಜಧಾನಿ ಬೆಂಗಳೂರಿನಲ್ಲಿ ಈಗ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ ಎಂದು ಹೇಳಿರುವ ಸಚಿವ ಕತ್ತಿ, ಧಾರವಾಡದಲ್ಲಿ ಹೈಕೋರ್ಟ್, ಬೆಳಗಾವಿಯಲ್ಲಿ ಸುವರ್ಣಸೌಧ ಇದೆ,‌ ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಮೂಲಸೌಕರ್ಯ ನಮ್ಮಲ್ಲಿವೆ ಎಂದಿದ್ದಾರೆ.

ಈ‌ ಹಿಂದೆಯೂ ಕೂಡಾ ಸಚಿವ ಉಮೇಶ್ ಕತ್ತಿ‌ ಹಲವು ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದರು.

- Advertisement -

Latest News

error: Content is protected !!