Sunday, June 7, 2026
Homeಕರಾವಳಿಉಡುಪಿಕಾಪು: ಮೊಳೆಗಳನ್ನು ಬಳಸಿ ಆನೆಯ ಕಲಾಕೃತಿ ರಚನೆ: ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಕಲಾವಿದ ಶಶಾಂಕ್...

ಕಾಪು: ಮೊಳೆಗಳನ್ನು ಬಳಸಿ ಆನೆಯ ಕಲಾಕೃತಿ ರಚನೆ: ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಕಲಾವಿದ ಶಶಾಂಕ್ ಸೇರ್ಪಡೆ

- Advertisement -
- Advertisement -

ಕಾಪು: ಕೇವಲ ಮೊಳೆಗಳನ್ನು ಬಳಸಿ ಆನೆಯ ಕಲಾಕೃತಿಯನ್ನು ರಚಿಸುವ ಮೂಲಕ ಕಾಪುವಿನ ಪ್ರತಿಭಾನ್ವಿತ ಕಲಾವಿದ ಶಶಾಂಕ್ ಎಸ್. ಸಾಲಿಯಾನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಗೊಂಡಿದ್ದಾರೆ.

ಗುರುವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಲಾ ಪ್ರೋತ್ಸಾಹಕ ಗುರುಚರಣ್ ಪೊಲಿಪು, ಗ್ರಾಮೀಣ ಪ್ರತಿಭೆಯಾಗಿರುವ ಶಶಾಂಕ್ ಸಾಲಿಯಾನ್ ಅವರು ಕೇರಳದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಗರ್ಭಿಣಿ ಆನೆಯ ಸಾವಿಗೆ ಮರುಕ ಪಟ್ಟು ಮೊಳೆಗಳ ಜೋಡಣೆಯೊಂದಿಗೆ ಆನೆಯ ಕಲಾಕೃತಿ ರಚಿಸಿದ್ದಾರೆ.

ಇದೊಂದು ಅಪೂರ್ವ ಸಾಧನೆಯಾಗಿದ್ದು, ಇವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಕಾಪುವಿನ ಜನತೆಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು.

- Advertisement -

Latest News

error: Content is protected !!