Wednesday, June 3, 2026
Homeತಾಜಾ ಸುದ್ದಿನಿರೀಕ್ಷಿತ ಪ್ರಮಾಣದಲ್ಲಿ ಇನ್ನೂ ಮುಂಗಾರು ಆರಂಭವಾಗಿಲ್ಲ: ಶಿವಮೊಗ್ಗದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿಕೆ

ನಿರೀಕ್ಷಿತ ಪ್ರಮಾಣದಲ್ಲಿ ಇನ್ನೂ ಮುಂಗಾರು ಆರಂಭವಾಗಿಲ್ಲ: ಶಿವಮೊಗ್ಗದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿಕೆ

- Advertisement -
- Advertisement -

ಶಿವಮೊಗ್ಗ: ನಿರೀಕ್ಷಿತ ಮುಂಗಾರು ಇನ್ನೂ ಆರಂಭವಾಗಿಲ್ಲ, ಆಗಸ್ಟ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸುನೀಲ್ ಕುಮಾರ್, ವಿದ್ಯುತ್ ಉತ್ಪಾದನೆಗೆ ಯಾವುದೇ ತೊಂದರೆ ಆಗದು ಎಂದು ತಿಳಿಸಿದ್ದಾರೆ.

ಮುಂಗಾರು ಸಂದರ್ಭದಲ್ಲಿ ಯಾವುದೇ ಅವಘಡ ಆಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಮುಂಗಾರು ನಂತರ ಗ್ರೀನ್ ಎನರ್ಜಿ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದಲ್ಲದೇ, ಹೈಬ್ರಿಡ್ ಪಾರ್ಕ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದ್ದು, 7 ಜಿಲ್ಲೆಗಳಲ್ಲಿ ಈ ಯೋಜನೆಗೆ ಸರ್ವೆ ಆಗಿದ್ದು,‌
ಹೈಬ್ರಿಡ್ ಪಾರ್ಕ್ ಯೋಜನೆಯಡಿ 1000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

- Advertisement -

Latest News

error: Content is protected !!