Saturday, June 6, 2026
Homeತಾಜಾ ಸುದ್ದಿಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನಲ್ಲಿ ಮತ್ತೊಂದು ತಿರುವು: ಏಕನಾಥ್ ಶಿಂಧೆ ಬಣದ 16 ಬಂಡಾಯ ಶಿವಸೇನೆ ಶಾಸಕರಿಗೆ...

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನಲ್ಲಿ ಮತ್ತೊಂದು ತಿರುವು: ಏಕನಾಥ್ ಶಿಂಧೆ ಬಣದ 16 ಬಂಡಾಯ ಶಿವಸೇನೆ ಶಾಸಕರಿಗೆ ಅನರ್ಹತೆ ನೋಟಿಸ್ ಜಾರಿ

- Advertisement -
- Advertisement -

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು  ಪಡೆದುಕೊಳ್ಳುತ್ತಿದ್ದು, ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ನೆಲೆಸಿರುವ ಏಕನಾಥ್ ಶಿಂಧೆ ಬಣದ 16 ಬಂಡಾಯ ಶಿವಸೇನೆ ಶಾಸಕರಿಗೆ ಮಹಾರಾಷ್ಟ್ರ ವಿಧಾನಸಭೆಯ ಉಪಸಭಾಧ್ಯಕ್ಷರು ಅನರ್ಹತೆ ನೋಟಿಸ್ ಜಾರಿ ಮಾಡಿದ್ದಾರೆ.

ಅಲ್ಲದೇ, ರಾಜ್ಯದ ವಿವಿಧ ಭಾಗಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಪೊಲೀಸರು ಮುಂಬೈನಲ್ಲಿ ಸೆಕ್ಷನ್ 144 ವಿಧಿಸಿದ್ದಾರೆ.

ಗುವಾಹಟಿ ಹೋಟೆಲ್‌ಲ್ಲಿ ತಮ್ಮೊಂದಿಗೆ ಬೀಡುಬಿಟ್ಟಿರುವ 38 ಶಾಸಕರ ಕುಟುಂಬ ಸದಸ್ಯರ ಭದ್ರತೆಯನ್ನ ಹಿಂತೆಗೆದುಕೊಂಡಿದ್ದರ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಶಿಂಧೆ ಶನಿವಾರ ಪತ್ರ ಬರೆದಿದ್ದು, ‘ದುರುದ್ದೇಶಪೂರಿತ’ ನಿರ್ಣಯ ಎಂದಿದ್ದಾರೆ.

- Advertisement -

Latest News

error: Content is protected !!