Thursday, June 4, 2026
Homeಕರಾವಳಿಮಂಗಳೂರು: ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು‌ ಮೂಲದ ತಂಡಗಳ ನಡುವೆ ಹೊಡೆದಾಟ

ಮಂಗಳೂರು: ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು‌ ಮೂಲದ ತಂಡಗಳ ನಡುವೆ ಹೊಡೆದಾಟ

- Advertisement -
- Advertisement -

ಮಂಗಳೂರು: ನಗರದ ಹೊರವಲಯದ ಉಚ್ಚಿಲದ ಖಾಸಗಿ ಬೀಚ್ ರೆಸಾರ್ಟ್ ನಲ್ಲಿ ಬೆಂಗಳೂರು‌ ಮೂಲದ ತಂಡಗಳ ನಡುವೆ ಹೊಡೆದಾಟ ನಡೆದಿದೆ.

ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ಕಿರಿಕ್ ಮಾಡಿದ್ದಾರೆ. ಎರಡು ಬಸ್ ಗಳಲ್ಲಿ ಆಗಮಿಸಿದ ಪ್ರವಾಸಿಗರು ರೆಸಾರ್ಟ್ ನಲ್ಲಿ ತಡರಾತ್ರಿ ಪಾರ್ಟಿ ಮಾಡಿದ್ದಾರೆ. ಬಳಿಕ  ಕುಡಿದು ಗಲಾಟೆ ಮಾಡಿ, ರಸ್ತೆ ಬದಿಗೆ ಬಂದು ಹೊಡೆದಾಡಿಕೊಂಡಿದ್ದಾರೆ.

ಕುಡಿತದ ಅಮಲಿನಲ್ಲಿದ್ದ ಕೆಲವರು ಸ್ಥಳೀಯ ಮನೆಯೊಂದಕ್ಕೆ ನುಗ್ಗಿ ದಾಂಧಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ವೇಳೆ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಸ್ಥಳೀಯರು. ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!