Thursday, June 4, 2026
Homeತಾಜಾ ಸುದ್ದಿಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕ್ರೂಸರ್, 7 ಮಂದಿ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕ್ರೂಸರ್, 7 ಮಂದಿ ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್​​ ಬಳ್ಳಾರಿ ನಾಲೆಗೆ ಬಿದ್ದ ಪರಿಣಾಮ, ಕ್ರೂಸರ್‌ನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ನಡೆದಿದೆ.

ಮೃತರು ದಿನಗೂಲಿಗಾಗಿ ಬೆಳಗಾವಿಗೆ ಬರುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ ಮೂವರು ಬದುಕಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಅಂತ ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು,ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇನ್ನೂ ಇದೇ ವೇಳೆ ದುರುಂತ ಸ್ಥಳಕ್ಕೆ ಪೋಲಿಸ್‌ ಆಯುಕ್ತ ಪೋಲಿಸ್‌ ಆಯುಕ್ತ ಡಾ. ಬೋರಲಿಂಗಯ್ಯ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Latest News

error: Content is protected !!