Monday, June 8, 2026
Homeಕರಾವಳಿಉಡುಪಿಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು

ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು

- Advertisement -
- Advertisement -

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ವಿಶ್ವಕರ್ಮ ಸಮುದಾಯದ ಮುಖಂಡರಿಂದ ಅಸಮಾಧಾನ ವ್ಯಕ್ತವಾಗಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಕೆಯಾಗಿದೆ.

ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಯುವ ಘಟಕದಿಂದ ನಳೀನ್ ಕುಮಾರ್ ಕಟೀಲ್ ಗೆ ಮನವಿ ಸಲ್ಲಿಕೆ ಮಾಡಲಾಗಿದೆ.

ಸಚಿವರು ವಿಶ್ವಕರ್ಮ ಸಮಾಜವನ್ನು ಇಭ್ಬಾಗ ಮಾಡಲು ಮುಂದಾಗಿದ್ದಾರೆ, ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿರುವ ಅಧಿಕಾರಿಯ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಆರೋಪ ಮಾಡಲಾಗಿದೆ‌‌.

ಬೆಂಗಳೂರಿನ ‌ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಿಯೋಗದ ಮೂಲಕ ಬಂದಿದ್ದ ವಿಶ್ವಕರ್ಮ ಸಮುದಾಯದ ಯುವ ಘಟಕದ ಮುಖಂಡರು ಮನವಿ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!