Saturday, June 6, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಲೇಷ ಬಲಿ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಲೇಷ ಬಲಿ ಸೇವೆ

- Advertisement -
- Advertisement -

ಸುಬ್ರಹ್ಮಣ್ಯ: ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಲೇಲ ಬಲಿ ಸೇವೆ ಸಲ್ಲಿಸಿದ್ದಾರೆ. ಕುಕ್ಕೆ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ಗೃಹ ಸಚಿವರು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ‌.

ಗೃಹ ಸಚಿವರ ಸ್ವ ಕ್ಷೇತ್ರ ತೀರ್ಥಹಳ್ಳಿಯ ಪುರುಷೋತ್ತಮ ಕೃಷಿ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ಆಶ್ಲೇಷ ಬಲಿ ಪೂಜೆ ಆಯೋಜಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಕುಕ್ಕೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಗೃಹ ಸಚಿವರಿಗೆ ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಸ್ವಾಗತ ಕೋರಿದರು. ಆಶ್ಲೇಷ ಬಲಿ ಪೂಜೆ‌ ನೆರವೇರಿಸಿದ ಬಳಿಕ  ಗೃಹ ಸಚಿವರು ವಾಪಸ್ ತೆರಳಿದ್ದಾರೆ.

- Advertisement -

Latest News

error: Content is protected !!