Thursday, June 4, 2026
Homeತಾಜಾ ಸುದ್ದಿದೇವೇಗೌಡರ ನಿವಾಸಕ್ಕೆ ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮೀಜಿ ಭೇಟಿ

ದೇವೇಗೌಡರ ನಿವಾಸಕ್ಕೆ ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮೀಜಿ ಭೇಟಿ

- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಇಂದು ಶ್ರೀ ಪೀಠ ಶೃಂಗೇರಿ ಕ್ಷೇತ್ರದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಭೇಟಿ ನೀಡಿದ್ದರು.

ಸ್ವಾಮೀಜಿ ಭೇಟಿ ಸಂದರ್ಭದಲ್ಲಿ ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಸ್ವಾಮೀಜಿ ಭೇಟಿ ನೀಡಿದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಸದಸ್ಯರು ಕೂಡಾ ಹಾಜರಿದ್ದರು.

ದೇವೇಗೌಡರ ಕುಟುಂಬ ಶೃಂಗೇರಿ ಪೀಠದ ಭಕ್ತರಾಗಿದ್ದು‌, ಪ್ರತೀ ವರ್ಷವೂ ಶೃಂಗೇರಿ ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದಾರೆ.

- Advertisement -

Latest News

error: Content is protected !!