Friday, June 5, 2026
Homeಕರಾವಳಿಕ್ವಾರಂಟೈನ್ ಮುಗಿಯುತ್ತಿದ್ದಂತೆ ಪ್ರಿಯಕರನೊಂದಿಗೆ ಪರಾರಿಯಾದ ಕಾರ್ಕಳದ ವಿವಾಹಿತೆ

ಕ್ವಾರಂಟೈನ್ ಮುಗಿಯುತ್ತಿದ್ದಂತೆ ಪ್ರಿಯಕರನೊಂದಿಗೆ ಪರಾರಿಯಾದ ಕಾರ್ಕಳದ ವಿವಾಹಿತೆ

- Advertisement -
- Advertisement -

ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ಹೋಮ್ ಕ್ವಾರಂಟೈನ್ ಮುಗಿಸಿದ ವಿವಾಹಿತೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾರೆ. ಈ ಕುರಿತಾಗಿ ಅಜೆಕಾರು ಠಾಣೆಗೆ ದೂರು ನೀಡಲಾಗಿದೆ.

ಕೈಕಂಬದ 28 ವರ್ಷದ ಗೃಹಿಣಿಗೆ 8 ವರ್ಷಗಳ ಹಿಂದೆ ಮದುವೆಯಾಗಿ ದಂಪತಿ ಪುಣೆಯಲ್ಲಿ ನೆಲೆಸಿದ್ದರು. ಕೆಲವು ತಿಂಗಳ ಹಿಂದೆ ಕೌಟುಂಬಿಕ ಸಮಸ್ಯೆ ಕಾರಣದಿಂದ ಮಗಳೊಂದಿಗೆ ಊರಿಗೆ ಬಂದ ಮಹಿಳೆ ಪೋಷಕರೊಂದಿಗೆ ವಾಸವಾಗಿದ್ದಾರೆ.

ಇದೇ ವೇಳೆ ಮಂಗಳೂರಿನಲ್ಲಿ ನಡೆದ ಸಂಬಂಧಿಕರೊಬ್ಬರ ಮದುವೆಗೆ ಹೋಗಿ ಊರಿಗೆ ಬಂದಿದ್ದ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ತಾಯಿ ಹಾಗೂ ಸಹೋದರನನ್ನು ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಮಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದ ಮಹಿಳೆಯ ತಂದೆ ಕ್ವಾರಂಟೈನ್ ಮುಗಿಸಿ ಬಂದ ಬಳಿಕ ಮನೆಯಲ್ಲಿದ್ದ ಮಗಳು ಅನೇಕ ವರ್ಷಗಳ ಹಿಂದೆ ಪ್ರೀತಿಸಿದ್ದ ಮೂಡಬಿದರೆಯ ವಿವಾಹಿತನೊಂದಿಗೆ ನಾಪತ್ತೆಯಾಗಿರುವುದು ಗೊತ್ತಾಗಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!