Friday, June 5, 2026
Homeತಾಜಾ ಸುದ್ದಿಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪ: ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ನಟಿ ಪವಿತ್ರಾ ಲೋಕೇಶ್ ದೂರು

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪ
: ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ನಟಿ ಪವಿತ್ರಾ ಲೋಕೇಶ್ ದೂರು

- Advertisement -
- Advertisement -

ಮೈಸೂರು: ಚಲನಚಿತ್ರ ನಟಿ ಪವಿತ್ರಾ ಲೋಕೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಲಾಗುತ್ತಿದೆ ಎಂದು ದೂರು ನೀಡಿದ್ದಾರೆ.

ಮೈಸೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನಟಿ ಪವಿತ್ರಾ ಲೋಕೇಶ್ ದೂರು ದಾಖಲಿಸಿದ್ದಾರೆ.

ನಕಲಿ ಖಾತೆ ತೆರೆದು ತೇಜೋವಧೆ ಮಾಡುತ್ತಿರುವ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಆರೋಪಡಿ ದೂರು ನೀಡಲಾಗಿದೆ.

ಪವಿತ್ರಾ ಲೋಕೇಶ್ ದೂರಿನ ಹಿನ್ನೆಲೆಯಲ್ಲಿ ಮೈಸೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೆಲವು ದಿನಗಳಿಂದ ಪವಿತ್ರಾ ಲೋಕೇಶ್ ಅವರ ವಿವಾಹದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಸುದ್ದಿಗಳು ಹರಿದಾಡಿದ್ದವು.

- Advertisement -

Latest News

error: Content is protected !!