- Advertisement -
![]()
- Advertisement -
ಕುಂದಾಪುರ: ಜುಗಾರಿ ಅಡ್ಡೆಗೆ ದಾಳಿ ನಡೆಸಿರುವ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದಲ್ಲಿ ಅಂದರ್-ಬಾಹರ್ ಇಸ್ಪೀಟ್ ಆಡುತ್ತಿದ್ದ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.
ಕುಂದಾಪುರ ಡಿವೈಎಸ್ಪಿ ಕೆ. ಶ್ರೀಕಾಂತ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ವಂಡ್ಸೆಯ ಸಂಜೀವ ಪೂಜಾರಿ (45), ಚಿತ್ತೂರಿನ ಅಭಿಜಿತ್ (29), ಬಳ್ಕೂರಿನ ನರಸಿಂಹ ಪೂಜಾರಿ (61), ಕರ್ಕುಂಜೆಯ ಚಂದ್ರ (49), ಹೆಮ್ಮಾಡಿಯ ಅಶ್ವತ್ (35), ಕರ್ಕುಂಜೆಯ ಅಶೋಕ (50), ತಲ್ಲೂರಿನ ಭುಜಂಗ ಶೆಟ್ಟಿ (44) ಮತ್ತು ನೂಜಾಡಿ ರಸ್ತೆ ನಿವಾಸಿ ಆದರ್ಶ (39) ಬಂಧಿಸಲ್ಪಟ್ಟಿದ್ದಾರೆ.
ಜುಗಾರಿ ಆಟಕ್ಕೆ ಉಪಯೋಗಿಸಿದ್ದ 1,61,000 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


