Thursday, June 4, 2026
Homeಕರಾವಳಿಕಡಬ: ರಾಮಕುಂಜದಲ್ಲಿ ಗೋಶಾಲೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಕಡಬ: ರಾಮಕುಂಜದಲ್ಲಿ ಗೋಶಾಲೆ ನಿರ್ಮಾಣಕ್ಕೆ ಶಂಕುಸ್ಥಾಪನೆ

- Advertisement -
- Advertisement -

ಕಡಬ: ತಾಲೂಕಿನ ರಾಮಕುಂಜದಲ್ಲಿ ನೂತನ ಗೋಶಾಲೆ ನಿರ್ಮಾಣಕ್ಕೆ ಪಶು ಸಂಗೋಪನಾ ಸಚಿವರಾದ ಪ್ರಭು ಬಿ.ಚೌಹಾಣ್ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ, ಜಿಲ್ಲಾ ಪ್ರಾಣಿ ದಯಾ ಸಂಘ ಹಾಗೂ ರಾಮ‌ಕುಂಜ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗೋಶಾಲೆಯನ್ನು ನಿರ್ಮಿಸಲಾಗುತ್ತಿದೆ.

ಇನ್ನು ಶಂಕುಸ್ಥಾಪನೆ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ್ ಮಠಂದೂರ್, ರಾಮ‌ಕುಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ.ಎನ್.ಕೆ, ಇತರ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!