Thursday, June 4, 2026
Homeಕರಾವಳಿಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡದ ಟೆಂಪೋ: ಓರ್ವ ಸಾವು, ಇಬ್ಬರಿಗೆ ಗಾಯ

ಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡದ ಟೆಂಪೋ: ಓರ್ವ ಸಾವು, ಇಬ್ಬರಿಗೆ ಗಾಯ

- Advertisement -
- Advertisement -

ಮಂಗಳೂರು : ವಿದ್ಯುತ್ ಕಂಬಕ್ಕೆ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ನಗರದ ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಮೃತ ಚಾಲಕ. ಗಾಯಗೊಂಡವರನ್ನು ಭಗವಂತರಾಯ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ಚಾಲಕ ಹಾಗೂ ಮತ್ತಿಬ್ಬರು ಕೂಲಿ ಕಾರ್ಮಿಕರು ಟೆಂಪೋದ ಒಳಗೆ ಸಿಲುಕಿ ಒದ್ದಾಡುತ್ತಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!