Thursday, June 4, 2026
Homeಕರಾವಳಿಬೆಳ್ತಂಗಡಿ; ನಿಡ್ಲೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ಅನಧಿಕೃತ ಗೂಡಂಗಡಿಗಳ ತೆರವು

ಬೆಳ್ತಂಗಡಿ; ನಿಡ್ಲೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ಅನಧಿಕೃತ ಗೂಡಂಗಡಿಗಳ ತೆರವು

- Advertisement -
- Advertisement -

ಬೆಳ್ತಂಗಡಿ; ನಿಡ್ಲೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ಗ್ರಾಮ ಪಂಚಾಯಿತಿಯ ನಿರ್ಣಯದಂತೆ ಪೊಲೀಸರು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಹಾಯದೊಂದಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.

ಪೆರಿಯಶಾಂತಿಯಿಂದ ಧರ್ಮಸ್ಥಳದ ವರೆಗೆ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಸ್ಥಳೀಯರು ಹಾಗೂ ಹೊರಗಿನಿಂದ ಬಂದವರು ಅನಧಿಕೃತ ಗೂಡಂಗಡಿಗಳನ್ನು ಕಟ್ಟಿಕೊಂಡು ವ್ಯಾಪಾರ ನಡೆಸಿಕೊಂಡಿದ್ದರು.   ಈ ಗೂಡಂಗಡಿಗಳನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಏಕಾಏಕಿ ಗೂಡಂಗಡಿಗಳನ್ನು ತೆರವು ಗೊಳಿಸಲು ಮುಂದಾದಾಗ ಅಂಗಡಿ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಬಳಿಕ ಅಂಗಡಿ ಮಾಲೀಕರ ಮನವೊಲಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗೂಡಂಗಡಿಗಳನ್ನು ತೆರವು ಗೊಳಿಸಲಾಯಿತು.

- Advertisement -

Latest News

error: Content is protected !!