Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ಬೈಕ್ ಸವಾರನ ಮೇಲೆ ಕಾಡಾನೆ ದಾಳಿ: ಓಡಿಹೋಗಿ ಪ್ರಾಣ ಉಳಿಸಿಕೊಂಡ ವ್ಯಕ್ತಿ

ಚಿಕ್ಕಮಗಳೂರು: ಬೈಕ್ ಸವಾರನ ಮೇಲೆ ಕಾಡಾನೆ ದಾಳಿ: ಓಡಿಹೋಗಿ ಪ್ರಾಣ ಉಳಿಸಿಕೊಂಡ ವ್ಯಕ್ತಿ

- Advertisement -
- Advertisement -

ಚಿಕ್ಕಮಗಳೂರು: ಮಲೆನಾಡಿನಲ್ಲಿ ದಿನದಿಂದ ದಿನಕ್ಕೆ ಕಾಡಾನೆ ದಾಳಿ ಹೆಚ್ಚಾಗಿದ್ದು ಅಪಾರ ಪ್ರಮಾಣದ ಬೆಳೆ ಹಾನಿ ಜೊತೆಗೆ ಜೀವಕ್ಕೂ ಹಾನಿ ಆಗುತ್ತಿದೆ.


ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿದ್ದು ಆತ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ನಡೆದಿದೆ.

ಮೂಡಿಗೆರೆಯ ಎಂ.ಐ.ಎಸ್.ಎಲ್. (MSIL)ನಲ್ಲಿ ಕೆಲಸ ಮಾಡುತ್ತಿದ್ದ ಸತ್ತಿಗನಹಳ್ಳಿ ಗ್ರಾಮದ ಪ್ರಭಾಕರ್ ನಿನ್ನೆ ರಾತ್ರಿ ಕೆಲಸ ಮುಗಿಸಿ 10 ಗಂಟೆಗೆ ಬೈಕಿನಲ್ಲಿ ಹಿಂದಿರುಗುವಾಗ ಕಾಡಾನೆ ದಾಳಿ ಮಾಡಿದೆ.
ಪ್ರಭಾಕರ್ ಕೂಡಲೇ ಬೈಕನ್ನ ಅಲ್ಲೇ ಬಿಟ್ಟು ಓಡಿ ಹೋಗಿ ಸಾವಿನಿಂದ ಪಾರಾಗಿದ್ದಾರೆ.

ಆನೆ ದಾಳಿಯಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಆನೆ ದಾಳಿಯಿಂದ ಪ್ರಭಾಕರ್ ಕಾಲು, ತಲೆಗೆ ತೀವ್ರ ಪೆಟ್ಟಾಗಿದ್ದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Latest News

error: Content is protected !!