Friday, June 5, 2026
Homeತಾಜಾ ಸುದ್ದಿಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ; ಯುವಕನ ವಿರುದ್ಧ ಸಿಟ್ಟಿಗೆದ್ದ ನಂದಕಿಶೋರ್

ಕಿಚ್ಚನ ಬಗ್ಗೆ ಅವಹೇಳನಕಾರಿ ಹೇಳಿಕೆ; ಯುವಕನ ವಿರುದ್ಧ ಸಿಟ್ಟಿಗೆದ್ದ ನಂದಕಿಶೋರ್

- Advertisement -
- Advertisement -

ನಟ ಕಿಚ್ಚ ಸುದೀಪ್ ಬಗ್ಗೆ ಯುವಕನೊಬ್ಬ ವಿಡಿಯೋ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ. ಈ ವಿಷಯ ನಿರ್ದೇಶಕ ನಂದ ಕಿಶೋರ್ ಗಮನಕ್ಕೆ ಬಂದಿದ್ದು, ಅವಹೇಳನಕಾರಿಯಾಗಿ ಮಾತನಾಡಿದ ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿಚ್ಚ ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ ಅವಾಚ್ಯಶಬ್ದಗಳಿಂದ ನಿಂದಿಸಿದ್ದಾನೆ.ಈ ಕುರಿತ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದೆ.

ಈ ವಿಷಯದ ಕುರಿತು ಸುದೀಪ್ ಅಭಿಮಾನಿಗಳು ಮಾತ್ರವಲ್ಲದೇ ಕನ್ನಡ ಚಿತ್ರರಂಗದಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಸಲುವಾಗಿ ನಂದ ಕಿಶೋರ್ ವಿಡಿಯೋ ಮಾಡಿದ್ದೂ, “ಕನ್ನಡ ಚಿತ್ರರಂಗದ ಕಲಾವಿದರ ಬಗ್ಗೆ ಮಾತನಾಡುವುದಕ್ಕೂ ಮುನ್ನ ಎಚ್ಚರಿಕೆ ಇರಲಿ. ಸುದೀಪ್ ಅವರಿಂದ ಯುವಕ ಆತ್ಮಹತ್ಯೆ ಮಾಡ್ಕೊಂಡ ಅಂತ ನಿನ್ನಿಂದ ಸಾಬೀತು ಮಾಡಲು ಸಾಧ್ಯನಾ? ಆತ್ಮಹತ್ಯೆಗೆ ಸುದೀಪ್ ಕಾರಣ ಅಂತಾ ಮನೆಯವರು ದೂರು ಕೊಟ್ಟಿದ್ದಾರಾ? ನಿನ್ನ ಬಳಿ ಸಾಕ್ಷ್ಯಾಧಾರವಿದ್ದರೆ ಕಾನೂನು ಬದ್ಧವಾಗಿ ಕೋರ್ಟ್ ನಲ್ಲಿ ಹೋರಾಡು ಅಥವಾ ಕನ್ನಡ ಚಲನಚಿತ್ರ ಮಂಡಳಿಯಲ್ಲಿ ದೂರು ಕೊಡು.ಅದನ್ನು ಬಿಟ್ಟು ಹಾದಿಬೀದಿಯಲ್ಲಿ ನಿಂತು ಮಾತನಾಡಬಾರದು” ಖಡಕ್ ವಾರ್ನಿಂಗ್ ನೀಡಿದ್ದಾರೆ.

- Advertisement -

Latest News

error: Content is protected !!